ಮೊಹಿದೀನ್ ಬಾವಾ ಒಲವು ಯಾರ ಕಡೆಗೆ ?-ವದಂತಿಗಳಿಗೆ ಪೂರ್ಣ ವಿರಾಮ-ಇಂದು ಕಂಕನಾಡಿಯಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ

ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೈ ಪಕ್ಷದ ಟಿಕೆಟ್ ತಪ್ಪಿತೆಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಮೊಹಿದೀನ್ ಬಾವಾ, ತನ್ನ ರಾಜಕೀಯ ಭವಿಷ್ಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಇಂದು ಕಂಕನಾಡಿಯಲ್ಲಿ ಸಭೆಯನ್ನು ಕರೆದಿದ್ದಾರೆ.

ಈ ನಡುವೆ, ರಾಜಕೀಯವಾಗಿ ನೆಲೆ ಕಳೆದುಕೊಂಡಿರುವ ಬಾವಾ ಬಿಜೆಪಿ ರಾಷ್ಟ್ರೀಯ ವೀಕ್ಷಕ ಡಾ.ರಾಧಾಕೃಷ್ಣ ಪ್ರಸಾದ್ ಅವರನ್ನು ಭೇಟಿಯಾಗಿ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದ್ದು, ಬಾವಾ ಬಿಜೆಪಿ ಕಡೆ ಮುಖಮಾಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವದಂತಿ ವಿಚಾರವನ್ನು ಮೊಹಿದೀನ್ ಬಾವಾ ನಿರಾಕರಿಸಿದ್ದು ತನ್ನ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳಲು ಇಂದು ಸಂಜೆ ಕಂಕನಾಡಿಯಲ್ಲಿ ಸಭೆ ಕರೆಯಲಾಗಿದೆ. ಇದನ್ನು ಸಹಿಸದ ಕೆಲವರು ನನ್ನ ಬಗ್ಗೆ ಇಲ್ಲಸಲ್ಲದ ವದಂತಿಗಳನ್ನು ಹರಡುತ್ತಿದ್ದಾರೆ ಎಂದು  ಹೇಳಿದ್ದಾರೆ. ಕಾಂಗ್ರೆಸ್ಸಿನಿಂದ ಕಳೆದ ಬಾರಿ ಟಿಕೆಟ್ ಕೈತಪ್ಪಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅತ್ಯಂತ ಹೀನಾಯವಾಗಿ ಸಾರ್ವಜನಿಕವಾಗಿ ಮಾತನಾಡಿದ್ದರು.

LEAVE A REPLY

Please enter your comment!
Please enter your name here