ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ಹಲವೆಡೆ ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನ

ಮಂಗಳೂರು: ರಣಬಿಸಿಲ ಬೇಗೆಗೆ ಬಳಲಿ ಬೆಂಡಾಗಿದ್ದ ಜನರಿಗೆ ವರುಣ ತಂಪೆರೆದಿದ್ದು, ಮಳೆ ಹನಿಯ ಸಿಂಚನದಿಂದ ಇಳೆ ತಂಪಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.

ಮಂಗಳೂರು ನಗರದ ಕೆಲವು ಪ್ರದೇಶ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಪ್ರದೇಶಗಳಲ್ಲಿ ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನವಾಗಿದೆ. ನಿನ್ನೆಯಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಕೆಲವು ಭಾಗದಲ್ಲಿ ಇಂದು ಮುಂಜಾನೆ ಸಾಧಾರಣ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಮಾ.24ರವರೆಗೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here