5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅಸ್ತು

ಮಂಗಳೂರು(ಬೆಂಗಳೂರು): ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಅನುಮತಿ ನೀಡಿದೆ.

ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ. ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ಇಂದು ಶುಕ್ರವಾರ(ಮಾ.22) ಪ್ರಕಟಿಸಿದೆ.’ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಂಬಂಧಿಸಿದವರ ಜೊತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ‘ರುಪ್ಸಾ’ ಹಾಗೂ ‘ಅವರ್ಸ್ ಸ್ಕೂಲ್’ ಸಲ್ಲಿಸಿದ್ದ ಮನವಿಯನ್ನು ನ್ಯಾಯಪೀಠ ಇದೇ ವೇಳೆ ತಿರಸ್ಕರಿಸಿದೆ. ತಡೆ ಕೋರಿ ಸುಪ್ರೀಂಕೋರ್ಟ್ ನಲ್ಲೇ ಮನವಿ ಸಲ್ಲಿಸಿ ಎಂದು ಸೂಚಿಸಿದೆ.

LEAVE A REPLY

Please enter your comment!
Please enter your name here