



ಮಂಗಳೂರು(ಬೆಂಗಳೂರು): ಪ್ರಧಾನಿ ನರೇಂದ್ರ ಮೋದಿಯವರಿಗೆ ಭೂತಾನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.







ಭೂತಾನ್ ರಾಜ ಪ್ರಧಾನಿ ಮೋದಿಯವರಿಗೆ ʼಆರ್ಡರ್ ಆಫ್ ಡ್ರುಕ್ ಗ್ಯಾಲ್ಪೋʼ ನೀಡಿ ಗೌರವಿಸಿದ್ದಾರೆ. ಭೂತಾನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪಡೆದ ಮೊದಲ ಭೂತಾನ್ನೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಈ ಕುರಿತು ಮಾತನಾಡಿದ ಮೋದಿ ಅವರು,ಇಂದು ನನ್ನ ಜೀವನದಲ್ಲಿ ಒಂದು ದೊಡ್ಡ ದಿನವಾಗಿದೆ. ನನಗೆ ಭೂತಾನ್ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಲಾಗಿದೆ. ಪ್ರತಿ ಪ್ರಶಸ್ತಿಯು ವಿಶೇಷವಾಗಿದೆ. ಆದರೆ ನೀವು ಬೇರೆ ದೇಶದಿಂದ ಪ್ರಶಸ್ತಿಯನ್ನು ಪಡೆದಾಗ ಎರಡೂ ದೇಶಗಳು ಸರಿಯಾದ ಹಾದಿಯಲ್ಲಿವೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.















