ಮಂಗಳೂರು(ಬೆಂಗಳೂರು): ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಐದು ತಿಂಗಳು ಕಾದರೂ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ’ ಎಂದರು.’ನಾವು ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಆರ್ಟಿಕಲ್ 32ರ ಅಡಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದೇವೆ. ಇಂದು ಬೆಳಿಗ್ಗೆ ಅರ್ಜಿ ಹಾಕಿದ್ದೇವೆ. ಕಾನೂನು ಪ್ರಕಾರ ನಮಗೆ ಸಿಗಬೇಕಾದ ಬರ ಪರಿಹಾರ ಸಿಗಬೇಕು ಎಂದರು.’ಎನ್‌ಡಿಆರ್‌ಎಫ್ ಅಡಿ ಪರಿಹಾರ ಹಣ ಕೊಡೋದಕ್ಕೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದೇವೆ. ಸುಪ್ರೀಂ ಕೋರ್ಟ್ ಒಂದು ವಾರ ರಜೆ ಇದೆ. ರಜೆ ಮುಗಿದ ಬಳಿಕ ನಮ್ಮ ನಮ್ಮ ಅರ್ಜಿ ವಿಚಾರಣೆಗೆ ಬರಲಿದೆ’ ಎಂದರು.