ಮತ್ತೆ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಗೆ ಶಂಕಿತ ನಕ್ಸಲರ ಭೇಟಿ

ಮಂಗಳೂರು(ಸುಬ್ರಹ್ಮಣ್ಯ): ಮೂರು ದಿನಗಳ ಹಿಂದೆ ದಕ್ಷಿಣ ಕನ್ನಡ-ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ನಕ್ಸಲರು ಭೇಟಿ ನೀಡಿದ್ದು, ಸುದ್ದಿಯಾದ ಬೆನ್ನಲ್ಲೇ ಮಾ.23ರಂದು ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸಾಂದರ್ಭಿಕ ಚಿತ್ರ

ಮಾ.23ರ ಸಂಜೆ 6 ಗಂಟೆ ಸಮಯಕ್ಕೆ ಶಂಕಿತ ನಕ್ಸಲರ ತಂಡ ಐನೆಕಿದು ಗ್ರಾಮದ ಅರಣ್ಯದಂಚಿನ ತೋಟದ ಮೂಲಕ ಆಗಮಿಸಿತ್ತು. ತೋಟದಲ್ಲಿದ್ದ ಕೆಲಸದವರ ಶೆಡ್‌ಗೆ ಭೇಟಿ ನೀಡಿದ ವೇಳೆ ಕೆಲಸದಾಳು ಶೆಡ್‌ನ‌ ಬಾಗಿಲು ಹಾಕಿದ್ದು, ಬಳಿಕ ಶಂಕಿತರ ತಂಡ ತೋಟದ ಮಾಲಕರ ಮನೆಗೆ ತೆರಳಿ, ಮನೆಯವರ ಜತೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here