ಮಂಗಳೂರು(ಮೈಸೂರು): ಮೈಸೂರಿನ ರಾಜ ಕುಟುಂಬದ ಯದುವೀರ್ ಅವರಿಗೆ ಮೈಸೂರು-ಮಡಿಕೇರಿ ಲೋಕಾಸಭಾ ಕ್ಷೇತ್ರದ ಟಿಕೆಟ್ ದೊರೆತು ಸಾಕಷ್ಟು ದಿನಗಳಾಗಿದ್ದರೂ ಪ್ರತಾಪ್ ಸಿಂಹ ಅವರಿಗೆ ಹೈಕಮಾಂಡ್ ಅವಕಾಶ ನಿರಾಕರಿಸಲು ಕಾರಣವೇನು ಎನ್ನುವುದು ನಿಗೂಢವಾಗಿಯೇ ಉಳಿದಿದೆ. ಹೈಕಮಾಂಡ್ ಕೂಡ ಯುವ ಸಂಸದನಿಗೆ ಟಿಕೆಟ್ ನೀಡದಿರಲು ಕಾರಣವೇನೂ ಎಂಬುವುದನ್ನು ತಿಳಿಸಿಲ್ಲ. ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುವ ಸಂದೇಶವನ್ನಷ್ಟೇ ಪಕ್ಷ ರವಾನಿಸಿದೆ.
ಇಂದು (ಮಾರ್ಚ್ 24) ಮೈಸೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ದಾಸ್ ಅಗರ್ವಾಲ್ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಿರುವ ಬಗ್ಗೆ ಮಾತನಾಡಿದ್ದು, ಟಿಕೆಟ್ ಕೈ ತಪ್ಪಲು ನಿರ್ದಿಷ್ಟವಾದ ಕಾರಣ ಏನೂ ಇಲ್ಲ. ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ನಮಗೆ ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಯದುವಂಶ ಸೇವೆ ಇಡೀ ದೇಶಕ್ಕೆ ಗೊತ್ತಿದೆ. ಈಗ ಅವರು ಪ್ರಜಾಪ್ರಭುತ್ವದ ಭಾಗ ಆಗಲು ಚುನಾವಣೆಗೆ ಬಂದಿದ್ದಾರೆ. ಇವರಿಂಗಿಂತಲೂ ಉತ್ತಮ ಅಭ್ಯರ್ಥಿ ಬೇಕಾ. ಯದುವೀರ್ ನಮ್ಮ ಸ್ಟಾರ್ ಕ್ಯಾಂಪೇನರ್. ಅವರನ್ನು ಎಲ್ಲಾ ಕಡೆಗಳಲ್ಲಿ ಬಳಸಿಕೊಳ್ಳುತ್ತೇವೆ ಎಂದು ಪರೋಕ್ಷವಾಗಿ ಪ್ರತಾಪ್ ಸಿಂಹಗಿಂತ ಯದುವೀರ್ ಒಳ್ಳೆಯ ಅಭ್ಯರ್ಥಿ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಪ್ರತಾಪ್ ಸಿಂಹ ಕೂಡ ನಮ್ಮ ಸ್ಟಾರ್ ಪ್ರಚಾರಕ. ಅದಕ್ಕಿಂತಲೂ ಅವರ ಬಗ್ಗೆ ಇನ್ನೇನೂ ಹೇಳಬೇಕು. ಪ್ರತಾಪ್ ಸಿಂಹಗೆ ಸ್ಟಾರ್ ಪ್ರಚಾರಕ ಸ್ಥಾನವೇ ಕೊಟ್ಟಿದ್ದೇವೆ. ಇದ್ದಕ್ಕಿಂತ ಇನ್ನೇನು ಬೇಕು ಹೇಳಿ. ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದಕ್ಕೆ ನಿರ್ದಿಷ್ಟವಾದ ಕಾರಣ ಏನು ಇಲ್ಲ ಎಂದರು.