ಮಂಗಳೂರು (ಬೆಂಗಳೂರು): ವಿಧಾನ ಪರಿಷತ್ನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸದಸ್ಯತ್ವ ತೊರೆದ ಬೆನ್ನಲ್ಲೇ ಇಂದು (ಶನಿವಾರ) ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ದಿಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಸಮ್ಮುಖದಲ್ಲಿ ತೇಜಸ್ವಿನಿಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತಾಡಿದ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದು, ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿ ಎಂದು ವಾಗ್ದಾಳಿ ನಡೆಸಿದ್ದಾರೆ. ಮೈಸೂರು ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಇದರಿಂದ ಅಸಮಾಧಾನಗೊಂಡಿದ್ದ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ತೇಜಸ್ವಿನಿಗೌಡ ವಿಧಾನ ಪರಿಷತ್ನ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದರು.