ಲೋಕಸಭಾ ಚುನಾವಣೆ-ಒಂದು ದಿನದ ಮಟ್ಟಿಗೆ ಕ್ಷೌರಿಕನಾದ ಅಭ್ಯರ್ಥಿ

ಮಂಗಳೂರು(ಬೆಂಗಳೂರು): ಚುನಾವಣೆ ಹತ್ತಿರ ಬಂದ ತಕ್ಷಣ ಅಭ್ಯರ್ಥಿಗಳು ಸಾರ್ವಜನಿಕರನ್ನು ಓಲೈಸಲು ನಾನಾ ತಂತ್ರಗಳನ್ನು ಹೆಣೆಯುತ್ತಾರೆ. ಇಲ್ಲೊಬ್ಬ ಸ್ವತಂತ್ರ ಅಭ್ಯರ್ಥಿ ಒಂದು ದಿನದ ಮಟ್ಟಿಗೆ ಕ್ಷೌರಿಕನಾದ ಘಟನೆ ತಮಿಳುನಾಡಿನ ರಾಮೇಶ್ವರಂನಲ್ಲಿ ನಡೆದಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಪಾರಿರಾಜನ್ ಚುನಾವಣಾ ಪ್ರಚಾರದ ಸಮಯದಲ್ಲಿ ಒಂದು ದಿನ ಕ್ಷೌರಿಕನಾಗಿ ಕೆಲಸ ಮಾಡಿದ್ದಾರೆ. ನನ್ನನ್ನು ಜನರು ಜನಸಾಮಾನ್ಯನಂತೆ ಕಾಣಬೇಕು ಎನ್ನುವುದು ನನ್ನ ಆಶಯ ಎಂದು ಪಾರಿರಾಜನ್ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದ ವೈರಲ್‌ ಆಗಿದ್ದು, ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಸಾರ್ವಜನಿಕರ ಸೇವಕರಾಗಲು ಪ್ರಯತ್ನಿಸುತ್ತಿದ್ದಾರೆ ಗೆದ್ದ ನಂತರ ಈ ಕಡೆಗೆ ತಿರುಗಿಯೂ ನೋಡುವುದಿಲ್ಲ ಎಂದು ಬರೆದಿದ್ದಾರೆ.

ಇತ್ತೀಚೆಗಷ್ಟೇ ಗೋರಖ್ ಪುರದಲ್ಲಿ ಅಭ್ಯರ್ಥಿ ರವಿ ಕಿಶನ್ ಟೀ ಮಾಡುತ್ತಿರುವ ದೃಶ್ಯ ವೈರಲ್ ಆಗಿತ್ತು. ರವಿ ಕಿಶನ್ ಗೋರಖ್ ಪುರದಲ್ಲಿ ಜನಸಂಪರ್ಕ ಅಭಿಯಾನ ನಡೆಸುತ್ತಿದ್ದರು.ಪ್ರಚಾರದ ವೇಳೆ ಟೀ ಅಂಗಡಿಯೊಂದರಲ್ಲಿ ನಿಲ್ಲಿಸಿ ನಂತರ ಶುಂಠಿ ಪುಡಿ ಮಾಡಿ ಟೀ ಮಾಡಿದ್ದರು. ಲೋಕಸಭೆ ಚುನಾವಣೆಯ ಉತ್ಸಾಹ ಈಗ ತೀವ್ರವಾಗಿದೆ, ಚುನಾವಣಾ ಪ್ರಚಾರಕ್ಕಾಗಿ ಚುನಾವಣಾ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ನಾನಾ ತಂತ್ರಗಳನ್ನು ಅನುಸರಿಸುತ್ತಿವೆ. ಇದಲ್ಲದೇ ಎಲ್ಲಾ ಅರ್ಹ ಮತದಾರರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಚುನಾವಣಾ ಆಯೋಗ ಮತದಾರರ ಪಟ್ಟಿಗೆ ತಿದ್ದುಪಡಿ ತರುತ್ತಿದೆ. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಸಾಕಷ್ಟು ಮುಂಚಿತವಾಗಿ ಬಿಡುಗಡೆ ಮಾಡಿದೆ.

LEAVE A REPLY

Please enter your comment!
Please enter your name here