ಮಂಗಳೂರು(ರಾಮನಗರ): ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸೊಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಎ.5ರಂದು ಬೆಂಗಳೂರಿನ ಹೊರವಲಯದ ಬಿಡದಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಪೋದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಳಗ್ಗೆಯಿಂದ ಎಲೆಕ್ಟ್ರಿಕ್ ಬಸ್ ಬಿಸಿಲಲ್ಲಿ ನಿಲ್ಲಿಸಿದ್ದರಿಂದ ಬ್ಯಾಟರಿ ಓವರ್ ಹೀಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆ ಇಡೀ ಬಸ್ಗೆ ಆವರಿಸಿದ ದಟ್ಟ ಹೊಗೆ. ಸಿಬ್ಬಂದಿ ಕ್ಷಣಕಾಲ ಆತಂಕಕ್ಕೊಳಗಾದರೂ, ಅದೃಷ್ಟವಶಾತ್ ಬಸ್ ನಲ್ಲಿ ಯಾವುದೇ ಸಿಬ್ಬಂದಿ, ಪ್ರಯಾಣಿಕರು ಇಲ್ಲದ್ದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಸಿಬ್ಬಂದಿ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿ ಬ್ಯಾಟರಿ ಹೊರತೆಗೆದಿದ್ದಾರೆ.