ಮೊದಿ ಪ್ರಧಾನಿಯಾಗಲೆಂದು ಕೈ ಬೆರಳು ಕತ್ತರಿಸಿಕೊಂಡ ಅರುಣ್‌ ವರ್ಣೆಕರ್

ಕಾರವಾರ/ಮಂಗಳೂರು: ನರೇಂದ್ರ ಮೋದಿ  ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ ರಕ್ತ ಅರ್ಪಿಸಿದ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.ಬೆರಳು ಕತ್ತರಿಸಿಕೊಂಡು ಅರುಣ್ ವರ್ಣೇಕರ್ ಎಂಬವರು​, ‘ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದು ಗೋಡೆ ಮೇಲೆ ರಕ್ತದಲ್ಲಿ ಬರೆದಿದ್ದಾರೆ.

ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ್ದಾರೆ.ಬೆರಳು ತುಂಡುಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, ‘‘ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ’’ ಎಂದು ಬರೆದಿದ್ದಾರೆ. ‘‘ಮೋದಿ ಬಾಬ ಪಿಎಂ, 3 ಬಾರ್ 78ತಕ್ 378, 378+ ಮೇರ ಮೋದಿ ಬಾಬಾ ಸಬ್ ಸೆ ಮಹಾನ್ ’ ಎಂದು ಗೋಡೆ ಮೇಲೆ ಹಾಗೂ ಪೋಸ್ಟರ್​​ನಲ್ಲಿ ಅರುಣ್ ಬರೆದಿದ್ದಾರೆ.

ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗ ಕೂಡ ಇದೇ ಅರುಣ್ ರಕ್ತದಲ್ಲಿ ಕಾಳಿಗೆ ಹರಕೆ ಇಟ್ಟಿದ್ದರು. ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಮೋದಿ ಭೇಟಿಯ ಬಯಕೆ ವ್ಯಕ್ತಪಡಿಸಿದ್ದ ಅರುಣ್ ವರ್ಣೇಕರ್  ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ಪೂಜೆ ಕೂಡ ಮಾಡುತ್ತಿದ್ದಾರೆ.

ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು. ಅಂಕೋಲಾಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಭೇಟಿಯಾಗಲು ಪ್ರಯತ್ನಿಸುವುದಾಗಿ ತಿಳಿಸಿದ್ದರು. ಆದರೆ, ಅವರ ಬಯಕೆ ಈಡೇರಿರಲಿಲ್ಲ.

LEAVE A REPLY

Please enter your comment!
Please enter your name here