ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಪಲ್ಟಿ-ಇಬ್ಬರಿಗೆ ಗಾಯ

ಮಂಗಳೂರು(ಮಡಿಕೇರಿ): ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಎ.8ರಂದು ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯವಾದ ಘಟನೆ ಮಡಿಕೇರಿ ತಾಲ್ಲೂಕಿನ ಜೋಡುಪಾಲ ಸಮೀಪ ಮೈಸೂರು-ಮಂಗಳೂರು ರಸ್ತೆಯಲ್ಲಿ ನಡೆದಿದೆ.

ಇದರಿಂದ‌ ಕೆಲವು ಗಂಟೆಗಳ‌ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ರಸ್ತೆಯ ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ತಕ್ಷಣ ಸ್ಥಳಕ್ಕೆ ಬಂದ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಮಗುಚಿದ್ದ ಬಸ್ ಅನ್ನು ಬದಿಗೆ ಸರಿಸಿ ರಸ್ತೆಯ ಒಂದು‌ ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗೌರಿಶಂಕರ ಎಂಬ ಖಾಸಗಿ ಬಸ್ ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿತ್ತು. ಇದರಲ್ಲಿ 17 ಮಂದಿ ಪ್ರಯಾಣಿಕರಿದ್ದರು. ಇಬ್ಬರಿಗೆ ಲಘು ಗಾಯಗಳಾಗಿದ್ದು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ರಸ್ತೆಯ ಒಂದು ಬದಿಯಲ್ಲಿ ವಾಹನಗಳು ಸಂಚರಿಸುತ್ತಿವೆ. ಬಸ್ ತೆರವುಗೊಳಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯ ಇನ್ ಸ್ಪೆಕ್ಟರ್ ಉಮೇಶ್ ಉಪ್ಪಳಿಕೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ.

LEAVE A REPLY

Please enter your comment!
Please enter your name here