ಏ.14ರಂದು ಪ್ರಧಾನಿ ನರೇದ್ರ ಮೋದಿ ಮಂಗಳೂರಿಗೆ

ಮಂಗಳೂರು : ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದೆ. ಅದರಂತೆ, ಏ. 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ. ಈ ಮೊದಲು ಏ. 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾವೇಶ ಇದೀಗ ಮಂಗಳೂರಿಗೆ ಸ್ಥಳಾಂತರಗೊಂಡಿದೆ.

ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6ರಿಂದ 7 ಗಂಟೆಯವರೆಗೆ ಹೆಬ್ಬಾಳ-ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.

LEAVE A REPLY

Please enter your comment!
Please enter your name here