ಮೋದಿ ಸಮಾವೇಶ ರದ್ದು, ರೋಡ್‌ ಶೋ ಗೆ ತಯಾರಿ

    ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ.

    ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಇದಕ್ಕಾಗಿ ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಜರ್ಮನ್ ನಿರ್ಮಿತ ಬೃಹತ್ ಪೆಂಡಾಲ್ ಹಾಕಲು ತಯಾರಿ ನಡೆದಿತ್ತು. ಆದರೆ ಕೊನೆ ಕ್ಷಣದಲ್ಲಿ ನಡೆದ ಬದಲಾವಣೆಯಿಂದ ಬೃಹತ್ ಸಮಾವೇಶವನ್ನು ರದ್ದು ಪಡಿಸಲಾಗಿದ್ದು, ಇದರ ಬದಲು ಮಂಗಳೂರು ನಗರದಲ್ಲಿ ಕೇವಲ ರೋಡ್ ಶೋ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿದೆ.

    LEAVE A REPLY

    Please enter your comment!
    Please enter your name here