ಅಡ್ಯಾರ್ ಬಳಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿದ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮಂಗಳೂರು: ಐಸ್ಕ್ರೀಂ ಘಟಕದ ಎಳನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.

ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏ.8 ರಂದು ಎಳನೀರು ಖರೀದಿಸಿದ್ದು, ಎಳನೀರು ಕುಡಿದ ಬಳಿಕ ಅವರಿಗೆ ವಾಂತಿ ಮತ್ತು ಭೇದಿ ಆರಂಭವಾಗಿದೆ. ಅಸ್ವಸ್ಥರು ಮೊದಲಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ. ನಂತರ ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಮೂವರು ಒಳರೋಗಿಗಳಾಗಿ ದಾಖಲಾಗಿದ್ದರೆ, 12 ಮಂದಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಹೊರರೋಗಿ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬುಧವಾರ ವಾಟ್ಸ್ ಆ್ಯಪ್ ಮೂಲಕ ದೂರು ಸ್ವೀಕರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಆಹಾರ ಭದ್ರತಾ ಅಧಿಕಾರಿ ಐಸ್​ಕ್ರೀಂ ಘಟಕಕ್ಕೆ ಭೇಟಿ ನೀಡಿ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಗಾಗಿ ಕಾಯಲಾಗುತ್ತಿದೆ. ಇದರ ಬೆನ್ನಲ್ಲೇ ಇಡೀ ಕಾರ್ಖಾನೆಯನ್ನು ಬಂದ್ ಮಾಡಿ ಸ್ವಚ್ಛಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನೂ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜನ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯಾಧಿಕಾರಿ ಮತ್ತು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಪುತ್ತೂರು ಸಂಪ್ಯದ ಕುಟುಂಬವೊಂದು ಇಲ್ಲಿಂದ ಎಳನೀರು ತಂದು ಸೇವಿಸಿದ್ದು ಅವರಿಗೂ ಭೇದಿಯಾಗಿ ಅಸ್ವಸ್ಥಗೊಂಡಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here