



ಮಂಗಳೂರು(ಶಿವಮೊಗ್ಗ): ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೊರಟಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಒಮ್ನಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.







ಸಾವೀಗೀಡಾದವರು ಶಿಕಾರಿಪುರ ತಾಲ್ಲೂಕಿನ ಹರಮಘಟ್ಟದ ನಂಜುಂಡಪ್ಪ, ರಾಕೇಶ್ ಹಾಗೂ ದೇವರಾಜ್ ಎಂದು ಗುರುತಿಸಲಾಗಿದೆ. ಒಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗ-ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ-ಬಿದರಹಳ್ಳಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳ ದಾವಣಗೆರೆ ಜಿಲ್ಲೆ ವ್ಯಾಪ್ತಿಗೆ ಬರುತ್ತದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲವರಿಗೂ ಗಾಯವಾಗಿದೆ. ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಒಮ್ನಿ ವಾಹನ ನುಜ್ಜುಗಜ್ಜಾಗಿದೆ. ಬಸ್ ಒಮ್ನಿ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆಪಕ್ಕದ ತಡೆಗೋಡೆಗೆ ಗುದ್ದಿದೆ. ಇದರಿಂದ ಬಸ್‌ನ ಮುಂದಿನ ಚಕ್ರ ಕಳಚಿದ್ದು, ಮುಂಭಾಗ ಜಖಂಗೊಂಡಿದೆ.















