ಇಂದಿನಿಂದ ಏಪ್ರಿಲ್​ 18ರವರೆಗೆ ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ-ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು: ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏ.18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಿದ್ದರೂ ವಿಪರೀತ ಬಿಸಲು ಮುಂದುವರೆದಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಸಂಕೇಶ್ವರ, ಹುಕ್ಕೇರಿ, ಯಡವಾಡದಲ್ಲಿ ಮಳೆಯಾಗಿದೆ. ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರಲಿದೆ. ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 36.8ಡಿಗ್ರಿ ಸೆಲ್ಸಿಯಸ್​ ಗರಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 38.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

LEAVE A REPLY

Please enter your comment!
Please enter your name here