ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್-ಆರೋಪಿಗಳು 10 ದಿನಗಳ ಕಾಲ ಎನ್ಐಎ ವಶಕ್ಕೆ

ಮಂಗಳೂರು(ಬೆಂಗಳೂರು): ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್​​ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರನ್ನು ಎನ್​ಐಎ ಅಧಿಕಾರಿಗಳು ಮಂಡಿವಾಳದ ಎಫ್​ಎಸ್​ಎಲ್​ ಸೆಂಟರ್​ ಬಳಿಯಿರುವ ಇಂಟ್ರಾಗೇಷನ್​​ ಸೆಲ್​ನಲ್ಲಿ ವಿಚಾರಣೆ ನಡೆಸಿದ್ದಾರೆ. ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್‌ಎಐ ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಅವರು, ಆರೋಪಿಗಳನ್ನು ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here