ಮಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿಯವರು ರವಿವಾರ(ಎ.14) ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ದ.ಕ. ಜಿಲ್ಲೆಯಲ್ಲಿ ಬಿಜೆಪಿ ಸಂಸದರ ಕೊಡುಗೆ ಏನು ಎಂಬ ಬಗ್ಗೆ ಉತ್ತರಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಬಿಜೆಪಿ ತಮ್ಮ ಅವಧಿಯಲ್ಲಿ ಅಭಿವೃದ್ಧಿ ವಿಚಾರದಲ್ಲಿ ಯಾವ ಸಾಧನೆ ಮಾಡಿದೆ ಎಂಬುದನ್ನು ಹೇಳಬೇಕು. ಸಾಮಾಜಿಕ ಸಾಮರಸ್ಯಕ್ಕೆ ತೊಂದರೆ ನೀಡುವ ಕೆಲಸದ ಜೊತೆ, ಅವರಿಗೆ ವೋಟು ಹೇಗೆ ಬರುತ್ತೆ ಅನ್ನುವ ನೆಲೆಯಲ್ಲಿ ಜನರ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾತ್ರ ಬಿಜೆಪಿ ಅವಧಿಯಲ್ಲಿ ನಡೆದಿದೆ. ಅಲ್ಲದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ನಿರಾಕರಣೆ ವಿಷಯದಲ್ಲಿ ಪ್ರಧಾನಿಯವರು ಬಯಸಿದ್ದರೆ ಅವಕಾಶ ಸಿಗುತ್ತಿತ್ತು. ಆದರೆ ಆ ಕಾರ್ಯ ಮಾಡದೆ ಇದೀಗ ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.