ಮಂಗಳೂರು(ಧಾರವಾಡ): ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ ಆರ್ನ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುನವರ್ ಅವರ ಮನೆಯಲ್ಲಿ 18 ಕೋಟಿ ಹಣ ಸೀಜ್ ಮಾಡಲಾಗಿದ್ದು, ಈ 18 ಕೋಟಿ ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿದ್ದಾರೆ.

ನಿನ್ನೆ ರಾತ್ರಿ ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ಆದರೆ, ದಾಳಿ ವೇಳೆ ಅವರ ಮನೆಯಲ್ಲಿ 18 ಕೋಟಿ ಬೃಹತ್ ಮೊತ್ತ ಪತ್ತೆಯಾಗಿದೆ. ಕೂಡಲೇ ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಯಿತು. 20 ಜನ ಅಧಿಕಾರಿಗಳು ದತ್ತುನವರ ಮನೆಯಲ್ಲಿ ನಿನ್ನೆ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಮಶಿನ್ ಮುಖಾಂತರ ಹಣ ಎಣಿಕೆ ಮಾಡಿದ್ದಾರೆ.
ಇಂದು ಮಧ್ಯಾಹ್ನದವರೆಗೂ ಅಧಿಕಾರಿಗಳು ತಪಾಸಣೆ ನಡೆಸಿ 18 ಕೋಟಿ ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿ ಪೊಲೀಸ್ ಭದ್ರತೆ ಮಧ್ಯೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಸಾಗಿಸಿದ್ದಾರೆ. ಬಸವರಾಜ ದತ್ತುನವರ ತಾನು ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದರಿಂದ ಐಟಿ ಅಧಿಕಾರಿಗಳು ಶೆಟ್ಟಿ ಅವರ ಕಚೇರಿ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಬುಧವಾರ ಮಧ್ಯಾಹ್ನ 2 ಗಂಟೆವರೆಗೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಎರಡು ಪೊಲೀಸ್ ಎಸ್ಕಾರ್ಟ್ ವಾಹನದ ಸಮೇತ ಭದ್ರತೆಯೊಂದಿಗೆ 18 ಕೋಟಿ ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿಕೊಂಡು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿದ್ದಾರೆ.