ಮಂಗಳೂರು(ಹೈದರಾಬಾದ್): ಇತ್ತೀಚೆಗೆ ಅಪಘಾತಗಳು ಹಾಗೂ ಹಿಟ್ ಆ್ಯಂಡ್ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್ವೊಂದು ಬೈಕ್ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್ ಆ್ಯಂಡ್ ರನ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೇಗವಾಗಿ ಬಂದ ಲಾರಿಯೊಂದು ಜನನಿಬಿಡ ಪ್ರದೇಶದಲ್ಲಿ ಬೈಕ್ಗೆ ಡಿಕ್ಕಿ ಹೊಡೆದು ಅದರ ಮುಂಭಾಗದ ಟೈರ್ ಅಡಿಯಲ್ಲಿ ಎಳೆದುಕೊಂಡು ಹೋಗುವುದನ್ನು ವಿಡಿಯೋ ತೋರಿಸುತ್ತದೆ.
ಆದರೆ ಪುಣ್ಯಕ್ಕೆ ಆ ಬೈಕ್ ಸವಾರ ಹೇಗೋ ಮಾಡಿ ಬೈಕ್ನಿಂದ ತಪ್ಪಿಸಿಕೊಂಡು ಲಾರಿಯ ಬದಿಯನ್ನು ಹಿಡಿದು ನೇತಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ದೂರ ಹೋಗ ಬಳಿಕ ಲಾರಿ ಚಕ್ರಕ್ಕೆ ಸಿಲುಕಿದ್ದ ಬೈಕ್ ಬೇರ್ಪಡುತ್ತದೆ. ಈ ಲಾರಿಯು ಬೈಕ್ಗೆ ಡಿಕ್ಕಿ ಹೊಡೆದು ಸ್ವಲ್ಪ ಸಮಯದ ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಏಪ್ರಿಲ್ 14ರಂದು ನಡೆದಿದ್ದು, ಏಪ್ರಿಲ್ 15ರಂದು ಹೈದರಾಬಾದ್ ನಿವಾಸಿ ಅಬ್ದುಲ್ ಮಜೀದ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಏಪ್ರಿಲ್ 14ರಂದು ರಾತ್ರಿ 11 ಗಂಟೆ ಸುಮಾರಿಗೆ ಚಂಪಾಪೇಟೆಯ ಲಕ್ಷ್ಮೀ ಗಾರ್ಡನ್ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿತ್ತು.
ಡಿಕ್ಕಿಯ ನಂತರ ರಸ್ತೆಯ ಎಡಭಾಗದಲ್ಲಿ ಬಿದ್ದಿದ್ದಾರೆ, ಆಗ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದರು, ಈ ಘಟನೆಯ ವಿಡಿಯೋವನ್ನು ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಾಡಿದ್ದಾರೆ. ಸವಾರನಿಗೆ ಗಾಯವಾಗದಿದ್ದರೂ ಆತನ ದ್ವಿಚಕ್ರವಾಹನವನ್ನು ಸುಮಾರು ದೂರ ಎಳೆದುಕೊಂಡು ಹೋಗಿದ್ದು, ಇದರಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ನಂತರ ಅದೇ ಟ್ರಕ್ ಚಂಪಾಪೇಟ್ ಟಿ ಜಂಕ್ಷನ್ನಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.
?#ViralVideo A speeding motorcycle got stuck under a truck on a busy road.#Hyderabad #Viral #Video #Accident |@HYDTP pic.twitter.com/oQXZcs0jNY
— unknown ? (@rupendr74016060) April 17, 2024