ಮಂಗಳೂರು(ಕಠ್ಮಂಡು): ಉತ್ತರ ನೇಪಾಳದ ಮನಾಸ್ಲು ಪರ್ವತದ ಇಳಿಜಾರಿನ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಭಾರಿ ಹಿಮಕುಸಿತ ಸಂಭವಿಸಿದೆ. ಪರಿಣಾಮ ಕೆಳಗಿನ ಭಾಗದಲ್ಲಿರುವ ಬೀರೇಂದ್ರ ಸರೋವರದಲ್ಲಿ ನೀರು ಉಕ್ಕಿ ಹರಿಯುತ್ತಿದೆ.
ಈವರೆಗೆ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಸರೋವರದಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುನ್ನೆಚ್ಚರಿಕೆಯಾಗಿ ತಗ್ಗು ಪ್ರದೇಶದಲ್ಲಿರುವ ಹಳ್ಳಿಗಳ ಜನರಿಗೆ ಎಚ್ಚರಿಕೆಯಿಂದಿರಲು ಗೃಹ ಸಚಿವಾಲಯ ಸೂಚನೆ ನೀಡಿದೆ. ಪ್ರವಾಹ ಸ್ಥಿತಿ ಎದುರಾದರೆ ಪರಿಸ್ಥಿತಿ ಬಿಗಡಾಯಿಸಲಿದೆ. ಸಮಯಕ್ಕೆ ಸರಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಿಗೆ ನಾವು ಮನವಿ ಮಾಡಲಾಗಿದೆ. ತಕ್ಷಣ ಭದ್ರತಾ ಸಿಬ್ಬಂದಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರ ನಾರಾಯಣ ಪ್ರಸಾದ್ ಮಾಹಿತಿ ನೀಡಿದ್ದಾರೆ.