ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ – ಸಿಎಂ ಸಿದ್ದರಾಮಯ್ಯ

ಮಂಗಳೂರು/ಶಿವಮೊಗ್ಗ: ಹುಬ್ಬಳ್ಳಿಯ ಎಂಸಿಎ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಗೆ ಸೂಕ್ತ ನ್ಯಾಯ ದೊರಕಿಸಬೇಕಿದೆ. ಆದ್ದರಿಂದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು. ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here