ಬೋಟ್ ಮೂಲಕ ಸಾಗಿಸುತ್ತಿದ್ದ 600 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ-14 ಪಾಕಿಸ್ತಾನಿಯರ ಬಂಧನ

ಮಂಗಳೂರು(ಅಹಮದಾಬಾದ್): ಪಾಕಿಸ್ತಾನದ ಬೋಟ್‌ನಿಂದ ಸುಮಾರು 600 ಕೋಟಿ ರೂಪಾಯಿ ಮೌಲ್ಯದ ಡಗ್ಸ್ ವಶಪಡಿಸಿಕೊಳ್ಳಲಾಗಿದೆ. ಗುಪ್ತಚರ ಮಾಹಿತಿಯ ಮೇರೆಗೆ ಅರಬ್ಬಿ ಸಮುದ್ರದಲ್ಲಿ ಪೋರ್‌ ಬಂದರಿನಿಂದ ಪಶ್ಚಿಮಕ್ಕೆ ಕಾರ್ಯಾಚರಣೆ ನಡೆಸಲಾಗಿತ್ತು. 86 ಕೆ.ಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 14 ಪಾಕಿಸ್ತಾನದ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಭಾರತೀಯ ಕರಾವಳಿ ಪಡೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದೆ. ಭಾರತೀಯ ಕರಾವಳಿ ಪಡೆ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ಮಾದಕವಸ್ತು ನಿಯಂತ್ರಣ ಸಂಸ್ಥೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದೆ.

 

LEAVE A REPLY

Please enter your comment!
Please enter your name here