ಮಂಗಳೂರು(ಬೆಂಗಳೂರು): ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಗಳ ಪೆನ್ಡ್ರೈವ್ ಪ್ರಕರಣ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.
ಇನ್ನು ಈ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಮುಜುಗರ ಉಂಟಾಗಿದ್ದು ಸ್ವಪಕ್ಷೀಯರಿಂದಲೇ ಪ್ರಜ್ವಲ್ ರೇವಣ್ಣ ಅವರ ಉಚ್ಚಾಟನೆಗೆ ಒತ್ತಡ ಕೇಳಿ ಬಂದ ಬೆನ್ನಲ್ಲೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.