ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು

ಮಂಗಳೂರು(ಉತ್ತರಾಖಂಡ): ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ಅನ್ನು ಉತ್ತರಾಖಂಡ ಸರ್ಕಾರ ರದ್ದುಗೊಳಿಸಿದ್ದು, ಈ ಮೂಲಕ ಪತಂಜಲಿಗೆ ಬಿಗ್ ಶಾಕ್ ನೀಡಿದೆ.

ಉತ್ತರಾಖಂಡ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಗಿಯನ್ನು ರದ್ದುಗೊಳಿಸಿದೆ. ಜೊತೆಗೆ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ವಿರುದ್ಧ ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಕ್ರಿಮಿನಲ್ ದೂರು ದಾಖಲು ಮಾಡಿದೆ. ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿಯ ದಿವ್ಯಾ ಫಾರ್ಮಸಿಯ ದೃಷ್ಟಿ ಐ ಡ್ರಾಪ್, ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಲೆಹ್, ಮುಕ್ತಾ ವತಿ ಎಕ್ಸ್‌ಟ್ರಾ ಪವರ್, ಲಿಪಿಡಮ್, ಬಿಪಿ ಗ್ರಿಟ್, ಮಧುಗ್ರಿಟ್, ಮಧುನಾಶಿನಿ ವಟಿ ಎಕ್ಸ್‌ಟ್ರಾ ಪವರ್, ಲಿವಾಮೃತ್ ಅಡ್ವಾನ್ಸ್, ಲಿವೋಗ್ರಿಟ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ ಎಂದು ಪರವಾನಗಿ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ.

LEAVE A REPLY

Please enter your comment!
Please enter your name here