



ಮಂಗಳೂರು: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯು ಮೇ ತಿಂಗಳು 7ನೇ ತಾರೀಖಿಗೆ ನಡೆಯಲಿದ್ದು ತಮ್ಮ ಅಪಾರ ರಾಜಕೀಯ ಅನುಭವ ಮತ್ತು ಚುನಾವಣಾ ತಂತ್ರಗಳನ್ನು ಧಾರೆಯರೆದು, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಿ ಪ್ರಚಾರ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಮಾಜಿ ಸಚಿವ ರಮಾನಾಥ ರೈ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ(ಆಡಳಿತ) ಜಿ.ಸಿ. ಚಂದ್ರಶೇಖರ್, ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಪತ್ರ ಬರೆದಿದ್ದಾರೆ.



















