ಮಂಗಳೂರು ( ಕನ್ಯಾಕುಮಾರಿ ): ಮದುವೆ ಸಮಾರಂಭಕ್ಕೆಂದು ಕನ್ಯಾಕುಮಾರಿಗೆ ತೆರಳಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಅಸುನೀಗಿದ್ದಾರೆ. ಮದುವೆಗೆ ತೆರಳಿದ್ದ ಸ್ನೇಹಿತರು ಲೇಮುರ್ ಬೀಚ್‌ನಲ್ಲಿ ಈಜಲು ಇಳಿದಾಗ ಈ ಧುರ್ಘಟನೆ ಸಂಭವಿಸಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಸಮುದ್ರಲ್ಲಿ ಈಜಲು ಹೋಗಿದ್ದು ಮೂವರನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ. ಎಲ್ಲರೂ ತಿರುಚಿನಪಳ್ಳಿಯಲ್ಲಿರುವ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ. ತಂಜಾವೂರಿನ ಚಾರುಕವಿ, ನೇಯ್ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್, ದಿಂಡಿಗಲ್‌ನ ಪ್ರವೀಣ್ ಸ್ಯಾಮ್ ಹಾಗೂ ಆಂದ್ರದ ವೆಂಕಟೇಶ್ ನೀರುಪಾಲದ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದಾರೆ. ಇಂಟರ್ನ್‌ಗಳಾಗಿದ್ದ ಕರೂರಿನ ನೇಶಿ, ಥೆಂಗಿಯ ಪ್ರಿಯಾಂಕಾ ಹಾಗೂ ಮದುರೈನ ಶರಣ್ಯ ಎಂಬ ಯುವತಿಯರನ್ನು ರಕ್ಷಿಸಲಾಗಿದೆ.
ಖಾಸಗಿ ಬೀಚ್ ಆಗಿರೋ ಲೆಮುರ್ ಬೀಚ್ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಲಾಗಿತ್ತು. ಇನ್ನು ಭಾನುವಾರದಂದು ಸಮುದ್ರದಲ್ಲಿ ಭಾರಿ ಅಲೆಗಳು ಇದ್ದ ಕಾರಣ ಯಾರೂ ಸಮುದ್ರಕ್ಕೆ ಇಳಿಯಬಾರದು ಅನ್ನೋ ಎಚ್ಚರಿಕೆ ನೀಡಲಾಗಿತ್ತು. ಹೀಗಿದ್ರೂ ಇವರು ಸಮುದ್ರಕ್ಕೆ ಹೇಗೆ ಹೋದ್ರು ಅನ್ನೋದು ತನಿಖೆ ನಡೆಸಲಾಗುತ್ತಿದೆ. ಮದುವೆಗೆ ಬಂದಿದ್ದ ಸ್ನೇಹಿತರೆಲ್ಲ ಬೇರೆ ಬೇರೆ ಗುಂಪುಗಳಾಗಿ ಚದುರಿ ಹೋಗಿದ್ದು, ಈ ಎಂಟು ಜನ ವಿದ್ಯಾರ್ಥಿಗಳು ಸಮುದ್ರ ಕಿನಾರೆ ಬಂದು ಸಮುದ್ರಕ್ಕೆ ಈಜಲು ತೆರಳಿದಿದ್ದರು.