ಪ್ರಜ್ವಲ್ ವಿರುದ್ಧದ “ಪೆಣ್”ಡ್ರೈವ್ ಪ್ರಕರಣ-9 ಸಂತ್ರಸ್ಥೆಯರ ಹೇಳಿಕೆ ದಾಖಲು

ಮಂಗಳೂರು(ಬೆಂಗಳೂರು): ಹಾಸನ ಸಂಸದ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕಾಮಕಾಂಡಕ್ಕೆ ಸಂಬಂಧಿಸಿದಂತೆ ಈಗಾಗಲೆ ಎಸ್‌ಐಟಿ ತಂಡ ಒಂಭತ್ತು ಸಂತ್ರಸ್ಥೆಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ಇಂದು ಮತ್ತೋರ್ವ ಸಂತ್ರಸ್ಥೆ ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವುದರೊಂದಿಗೆ ಅತ್ಯಾಚಾರಕ್ಕೆ ಸಂಬಂಧಿಸಿದ ಮೂರನೇ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪ್ರಜ್ವಲನ ಕಾಮಕಾಂಡದ ವಿಡಿಯೋಗಳಲ್ಲಿ ಕಾಣಿಸಿಕೊಂಡ ಇಬ್ಬರು ಸರ್ಕಾರಿ ಅಧಿಕಾರಿಗಳೂ ಸೇರಿದಂತೆ ಒಂಭತ್ತು ಸಂತ್ರಸ್ಥೆಯರನ್ನು ಎಸ್‌ಐಟಿ ಗುರುತಿಸಿದ್ದು, ವಿಚಾರಣೆಯನ್ನು ತೀವ್ರಗೊಳಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಆರೋಪದಡಿ ಸಿಐಡಿ ಸೈಬರ್ ಠಾಣೆಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ. ಇನ್ನೊಂದೆಡೆ, ತನ್ನ ಪುತ್ರನಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2.45ಕ್ಕೆ ಮುಂದೂಡಿದೆ. ಈಗಾಗಲೇ ಬಂಧನಕ್ಕೆ ಒಳಗಾಗಿರುವ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಇಂದು ಪೂರ್ಣಗೊಳ್ಳಲಿದ್ದು, ಸಂಜೆ 4 ಗಂಟೆ ಒಳಗೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

LEAVE A REPLY

Please enter your comment!
Please enter your name here