ಮಂಗಳೂರು(ಬೆಂಗಳೂರು): ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಇಲಾಖೆ ನಿರ್ಧರಿಸಿದೆ.
ಹೊಸ ಪಡಿತರ ಚೀಟಿಗಾಗಿ ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾನ್ಯ ಮಾಡದಿರಲು ಆಹಾರ ಇಲಾಖೆ ತೀರ್ಮಾನಿಸಿದ್ದು, ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚಿನ ಹಣ ಪಡೆಯುತ್ತವೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ. ಜೂನ್ ಮೊದಲ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಿದ್ದು, ಪ್ರಮುಖ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.