ಮಂಗಳೂರು(ಕೋಲಾರ): ಇಡೀ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿರುವ ವೇಳೆಯಲ್ಲೇ ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಚೇರಿ ಕೆಲಸದ ಅವಧಿಯಲ್ಲೇ ಖುಲ್ಲಂಖುಲ್ಲಾ ಕಿಸ್ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.
ಪಂಚಾಯಿತಿ ಕಾರ್ಯಾಲಯದಲ್ಲಿಯೇ ಖುಲ್ಲಂ ಖುಲ್ಲಾ ಕಿಸ್ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದು, ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿ ಸಿಬ್ಬಂದಿಯ ಈ ಕಿಸ್ಸಿಂಗ್ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಈ ಫೋಟೋಗಳು ವೈರಲ್ ಆಗುತ್ತಿದ್ದಂತೆ ಮಹಿಳೆಯಿಂದ ಲೈಂಗಿಕ ಕಿರುಕುಳದ ಕೇಸ್ ದಾಖಲಾಗಿದೆ. ಪಂಚಾಯತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಹಾಗೂ ಮಹಿಳಾ ಉದ್ಯೋಗಿ ಜತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗುತ್ತಿವೆ. ಆರೋಪಿ ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಚೇರಿಯ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಕಾಮಚೇಷ್ಟೆ ಮಾಡಿದ್ದಾರಂತೆ. ಅದನ್ನು ವಿರೋಧ ಮಾಡಿದ್ದಕ್ಕೆ ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜತೆಗೆ, ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ. ಮುತ್ತು ಕೊಡುವಂತೆ ಬಲವಂತವಾಗಿ ಪ್ರೇರೇಪಿಸಿ ಅದನ್ನು ತನ್ನ ಮೊಬೈಲ್ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾನೆ. ನಂತರ ಇದೇ ಫೋಟೋ ಬಳಸಿ ಬ್ಲ್ಯಾಕ್ಮೇಲ್ ಮಾಡಿ ಹಿಂಸೆ ನೀಡಿದ್ದಾನೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.