ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ-ಎಂಡೊಮೆಟ್ರಿಯೊಸಿಸ್ ಪರೀಕ್ಷಿಸಿಕೊಳ್ಳುವಂತೆ ಸಲಹೆ-ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬಾಲಿವುಡ್​​ ನಟಿ ಶಿಲ್ಪಾ ಶೆಟ್ಟಿ ಸಹೋದರಿ, ನಟಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂಡೊಮೆಟ್ರಿಯೊಸಿಸ್ ಸಮಸ್ಯೆ ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಶಮಿತಾ ಅನಾರೋಗ್ಯದ ಮಾಹಿತಿ ನೀಡಿದ್ದಾರೆ.ಶಮಿತಾ ಶೆಟ್ಟಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಆಸ್ಪತ್ರೆಯಲ್ಲಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಕಾರಣವನ್ನು ವಿವರಿಸಿದ್ದಾರೆ. ಜೊತೆಗೆ ಹೊರಗಿರುವ ಎಲ್ಲಾ ಮಹಿಳೆಯರಿಗೂ ಈ ಬಗ್ಗೆ ಜಾಗೃತರಾಗಿರುವಂತೆ, ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಆಸ್ಪತ್ರೆಯಿಂದ ತಮ್ಮ ವಿಡಿಯೋ ಶೇರ್ ಮಾಡಿಕೊಂಡ ಶಮಿತಾ ಶೆಟ್ಟಿ, ”ಸುಮಾರು ಶೇ. 40ರಷ್ಟು ಮಹಿಳೆಯರು ಎಂಡೊಮೆಟ್ರಿಯೊಸಿಸ್‌ನಿಂದ ಬಳಲುತ್ತಿದ್ದಾರೆ ಎಂಬುದು ನಿಮಗೆ ತಿಳಿದಿದೆಯೇ. ನಮ್ಮಲ್ಲಿ ಹೆಚ್ಚಿನವರಿಗೆ ಈ ಕಾಯಿಲೆ ಬಗ್ಗೆ ತಿಳಿದಿಲ್ಲ. ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳುವವರೆಗೂ ಕೆಲಸ ನಿಲ್ಲಿಸದ ನನ್ನ ವೈದ್ಯರಾದ ಡಾ. ನೀತಾ ವಾರ್ತಿ ಮತ್ತು ಡಾ. ಸುನೀತಾ ಬ್ಯಾನರ್ಜಿ ಇಬ್ಬರಿಗೂ ಧನ್ಯವಾದ ಅರ್ಪಿಸಲು ಬಯಸುತ್ತೇನೆ. ಸದ್ಯ ಶಸ್ತ್ರಚಿಕಿತ್ಸೆಯಿಂದ ರೋಗಮುಕ್ತಳಾಗಿದ್ದೇನೆ. ಉತ್ತಮ ಆರೋಗ್ಯಕ್ಕಾಗಿ, ನೋವು ಮುಕ್ತ ದಿನಗಳಿಗಾಗಿ ಎದುರು ನೋಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಒಂದು ಕಾಯಿಲೆಯಾಗಿದ್ದು, ಇದರಲ್ಲಿ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಈ ಕಾಯಿಲೆಯಿಂದ ಸೊಂಟದಲ್ಲಿ ತೀವ್ರವಾದ ನೋವನ್ನು ಉಂಟುಮಾಡುತ್ತದೆ. ಜೊತೆಗೆ ಗರ್ಭಿಣಿಯಾಗಲು ಮಹಿಳೆಯರಿಗೆ ಕಷ್ಟವಾಗುತ್ತದೆ. ಎಂಡೊಮೆಟ್ರಿಯೊಸಿಸ್​ಗೆ ತುತ್ತಾದ ಮಹಿಳೆಯರಿಗೆ ನೋವು ಮೊದಲ ಮುಟ್ಟಿನ ಅವಧಿಯಲ್ಲಿ ಪ್ರಾರಂಭವಾಗಿ ಅದು ಋತುಬಂಧದವರೆಗೆ ಇರುತ್ತದೆ.

LEAVE A REPLY

Please enter your comment!
Please enter your name here