ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ.21ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದು, ಬಳಿಕ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನದ ಬಳಿಕ ಮಂಗಳೂರಿಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.