ಮಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಯನ್ನು ಪಕ್ಷ ವಹಿಸಿಕೊಂಡಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪೂರಕವಾದ ವಾತಾವರಣವಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲೂ ಅದು ಮುಂದುವರಿಯಲಿದೆ. ಈ ಹಿಂದೆ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯನ್ನು ಪಕ್ಷಕ್ಕಿಂತಲೂ ಅಭ್ಯರ್ಥಿಗಳೇ ಗಂಭೀರಾಗಿ ಪರಿಗಣಿಸುತ್ತಿದ್ದರು. ಆದರೆ ಈ ಬಾರಿ ಮುಖ್ಯಮಂತ್ರಿ ಸಹಿತ ಪಕ್ಷದ ಹಿರಿಯ ನಾಯಕರು ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಹಾಗಾಗಿ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.