ಮಂಗಳೂರು(ಬೆಂಗಳೂರು): ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಸಂಬಂಧ ಕಾಯ್ದಿರಿಸಲಾಗಿದ್ದ ಆದೇಶವನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ. ಪ್ರೀತ್ ಅವರು ಸೋಮವಾರ(ಮೇ.20) ಪ್ರಕಟಿಸಿದೆ. ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ