ಮಂಗಳೂರು(ಬೆಂಗಳೂರು): ವಿಧಾನ ಪರಿಷತ್ ನ 11 ಸದಸ್ಯರ ಅವಧಿ ಜೂ.17ಕ್ಕೆ ಮುಕ್ತಾಯಗೊಳ್ಳಲಿದ್ದು, ಜೂ.13ರಂದು 11 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿರುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ.
ರಾಜ್ಯ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಅರವಿಂದ ಕುಮಾರ್ ಅರಳಿ, ಎನ್ ಎಸ್ ಬೋಸರಾಜು, ಕೆ ಗೋವಿಂದ ರಾಜ್, ಡಾ. ತೇಜಸ್ವಿನಿ ಗೌಡ, ಮುನಿರಾಜು ಗೌಡ ಪಿ ಎಂ, ಕೆ ಪಿ ನಂಜುಂಡಿ ವಿಶ್ವಕರ್ಮ, ಬಿ ಎಂ ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್ ರುದ್ರೇಗೌಡ, ಕೆ ಹರೀಶ್ ಕುಮಾರ್ ಇವರ ವಿಧಾನ ಪರಿಷತ್ ಸದಸ್ಯತ್ವ ಜೂ.17ಕ್ಕೆ ಅಂತ್ಯಗೊಳ್ಳಲಿದೆ. ಈ 11 ವಿಧಾನ ಪರಿಷತ್ ಸದಸ್ಯರ ಸ್ಥಾನಕ್ಕೆ ಜೂ.13ರಂದು ಚುನಾವಣೆ ನಡೆಯಲಿದೆ.
ಮೇ.27ಕ್ಕೆ ಅಧಿಸೂಚನೆ ಹೊರಡಿಸಲಿದ್ದು, ಜೂ.3 ನಾಮಪತ್ರ ಸಲ್ಲಿಕೆಗೆ ಕೊನೆಯದಿನವಾಗಿರುತ್ತದೆ. ಜೂ.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂ.6 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಜೂ.13ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಬಳಿಕ ಫಲಿತಾಂಶ ಘೋಷಣೆಯಾಗಲಿದೆ.