ಹುಲಿಗೆ ಡಿಕ್ಕಿ ಹೊಡೆದ ಕಾರು-ಹುಲಿ ಸಾವು

ಮಂಗಳೂರು(ಮಹಾರಾಷ್ಟ್ರ): ಮಹಾರಾಷ್ಟ್ರದ ನವೆಂಗಾವ್ ನಾಗ್ಜಿರಾ ಅಭಯಾರಣ್ಯದಲ್ಲಿ ವೇಗವಾಗಿ ಬಂದ ಕಾರೊಂದು ಹುಲಿಗೆ ಡಿಕ್ಕಿ ಹೊಡೆಯುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರು ಡಿಕ್ಕಿ ಹೊಡೆದ ಪರಿಣಾಮ ಹುಲಿ ನಡೆಯಲಾಗದೆ ಒದ್ದಾಡುತ್ತಿತ್ತು. ಘಟನೆ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಗಿದ್ದು, ತೀವ್ರವಾಗಿ ಗಾಯಗೊಂಡ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರಕ್ಕೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಹುಲಿ ಪ್ರಾಣಬಿಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here