ಪಪುವಾ ನ್ಯೂಗಿನಿಯಾದಲ್ಲಿ ಭಯಾನಕ ಭೂಕುಸಿತ-670 ಮಂದಿ ಸಾವು

ಮಂಗಳೂರು(ನ್ಯೂಗಿನಿಯಾ): ಭೂಕುಸಿತದಿಂದಾಗಿ ಸುಮಾರು 2000ಕ್ಕೂ ಹೆಚ್ಚು ಮಂದಿ ಸಾವನ್ನಪಿದ್ದ ದಾರುಣ ಘಟನೆ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ್ದು, ಇಡೀ ಗ್ರಾಮವೇ ಸ್ಮಶಾನವಾಗಿ ಮಾರ್ಪಟ್ಟಿದೆ.

ಎಂಗಾ ಪ್ರಾಂತ್ಯದ ಯಂಬಾಳಿ ಗ್ರಾಮದ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಭಾರೀ ಪ್ರಮಾಣದ ಮಳೆಯಿಂದಾಗಿ ಉಂಟಾದ ಈ ಭೂಕುಸಿತದಲ್ಲಿ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇನ್ನೂ ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಮುಚ್ಚಿಹೋಗಿದ್ದಾರೆ. ಈಗಾಗಲೇ ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಲಾಗಿದ್ದು, ಇಡೀ ಗ್ರಾಮವೇ ನರಕ ಸದೃಶ್ಯವಾಗಿದೆ. ಸುಮಾರು 150 ಮನೆಗಳು ಭೂಕುಸಿತದಿಂದಾಗಿ ಭೂಮಿಯಲ್ಲಿ ಹುದುಗಿಗೋಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಘಟನಾ ಸ್ಥಳದಲ್ಲಿ ಮಳೆಯ ನೀರು ನಿರಂತರವಾಗಿ ಹರಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೂ ಅಡಚಣೆಯಾಗಿದೆ. ಶುಕ್ರವಾರದಿಂದಲೂ ಸಾಲು ಸಾಲಾಗಿ ಭೂಕುಸಿತ ಸಂಭವಿಸುತ್ತಿದ್ದು, ಶುಕ್ರವಾರವೇ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಆ ಬಳಿಕ ಸಾವಿನ ಸಂಖ್ಯೆ ಏಕಾಏಕಿ ಏರಿಕೆಯಾಗಿದೆ. ಭೂಕುಸಿತ ಉಂಟಾದ ಸ್ಥಳದಲ್ಲಿ ಸಂಬಂಧಿಕರನ್ನು ಹುಡುಕುವ ಕಾರ್ಯದಲ್ಲಿ ಜನ ನಿರತರಾಗಿದ್ದು, ಜನರನ್ನು ನಿಯಂತ್ರಿಸುವುದು ಸಿಬ್ಬಂದಿಗಳಿಗೆ ಕಷ್ಟವಾಗಿದೆ. ಅವಶೇಷಗಳನ್ನು ತೆರವುಗೊಳಿಸುವಲ್ಲಿ ಸಿಬ್ಬಂದಿಗಳಿಗೆ ಜನರು ಸಹಕರಿಸುತ್ತಿದ್ದು, ಈ ಗ್ರಾಮ ಮತ್ತು ಸುತ್ತಮುತ್ತಲಿನಲ್ಲಿ 4 ಸಾವಿರ ಜನ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

https://x.com/i/status/1794402825788915801

LEAVE A REPLY

Please enter your comment!
Please enter your name here