ಮಂಗಳೂರು(ಮೈಸೂರು): ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವಿಜಯನಗರದ ರಾಯಲ್ ಇಷಾ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಈ ವೇಳೆ ಐವರನ್ನು ಪೊಲೀಸರು ಬಂಧಿಸಿದ್ದಾರೆ, ಐವರ ಪೈಕಿ ಇಬ್ಬರು ಟ್ರಾಫಿಕರ್ಸ್, ಇಬ್ಬರು ಗಿರಾಕಿಗಳು ಹಾಗೂ ಒಬ್ಬ ಪಿಂಪ್ ಎಂದು ಪೊಲೀಸರು ತಿಳಿಸಿದ್ದಾರೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಒಡನಾಡಿ ಸಂಸ್ಥೆಗೆ ನಾಗರೀಕರು ದೂರು ನೀಡಿದ್ದರು. ಎಸಿಪಿ ನೇತೃತ್ವದಲ್ಲಿ ವಿಜಯನಗರ ಪೊಲೀಸರು ದಾಳಿ ನಡೆಸುವ ವೇಳೆ ಒಡನಾಡಿ ಸಂಸ್ಥೆಯವರು ಕೂಡಾ ಸ್ಥಳದಲ್ಲಿ ಹಾಜರಿದ್ದರು.