ಮಂಗಳೂರು: ತಾಯಿ ಮನೆಯಿಂದ ಗಂಡನ ಮನೆ ಕೂಳೂರಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರಗೆ ತೆರಳಿದ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕಂಪಾಡಿ ಮೀನಕಳಿ ನಿವಾಸಿ ಶ್ವೇತಾ (31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು. ನಿನ್ನೆ ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕೂಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ಮನೆಗೂ ಬಾರದೆ, ಗಂಡನ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ. ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಪಣಂಬೂರು ಪೊಲೀಸರಿಗೆ ತಿಳಿಸುವಂತೆ ಕೋರಲಾಗಿದೆ. ಸಂಪರ್ಕಿಸಬೇಕಾದ ಸಂಖ್ಯೆ 9480805331, 0824222053.