ಜರ್ಮನಿಯಿಂದ ಬೆಂಗಳೂರಿಗೆ ಹಾರಿದ ಪ್ರಜ್ವಲ್ ರೇವಣ್ಣ

ಮಂಗಳೂರು(ಬೆಂಗಳೂರು): ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಹೊರಟ ಫ್ಲೈಟ್‌ನ ಪ್ಯಾಸೆಂಜರ್ಸ್ ಲಿಸ್ಟ್ ಪ್ರಕಟವಾಗಿದ್ದು, ಬೆಂಗಳೂರಿನ ಇಮಿಗ್ರೇಷನ್ ಅಧಿಕಾರಿಗಳಿಗೆ ರವಾನಿಸಿದ್ದಾರೆ.

ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 31ರಂದು ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

LEAVE A REPLY

Please enter your comment!
Please enter your name here