ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ-ಬಳಸಿದ್ದಲ್ಲಿ 7 ವರ್ಷ ಜೈಲು, 10‌ಲಕ್ಷ ರೂ. ದಂಡ-ಸರಕಾರದ ಆದೇಶ

ಮಂಗಳೂರು(ಬೆಂಗಳೂರು): ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್ ಬಳಸಿದರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ ವಿಧಿಸಲಾಗುವುದು ಸರ್ಕಾರ ಎಚ್ಚರಿಸಿದೆ.

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ ಹಾಗೂ ಇತರೆ ತಿನಿಸುಗಳನ್ನು ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್ (ದ್ರವ ಸಾರಜನಕ) ಬಳಸುವುದನ್ನು ನಿರ್ಬಂಧಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ. ಮೇ 3ರಂದು ಈ ಆದೇಶ ಹೊರಡಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಮಾಹಿತಿ ನೀಡಲಾಗಿದೆ. ನೈಟ್ರೋಜನ್ ಪಾನ್ ತಿಂದು 12 ವರ್ಷರ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು. ಈ ಘನಟೆ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ಸರ್ಕಾರಕ್ಕೆ ಮನವಿ ಮಾಡಿತ್ತು. ಒಂದು ವೇಳೆ ಲಿಕ್ವಿಡ್ ನೈಟ್ರೋಜನ್ ಪಾನ್ ಮಾರಿದ್ದೇ ಆದರೆ ಅಂತಹ ಹೋಟೆಲ್ ಅಥವಾ ಪಾನ್ ಬೀಡಾ ದಂಡ ಆಥವಾ ಪರವಾನಗಿ ರದ್ದು ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.

LEAVE A REPLY

Please enter your comment!
Please enter your name here