ಎಸ್‌ಐಟಿ ಕಚೇರಿಗೆ ಬಂದ ಪ್ರಜ್ವಲ್ ರೇವಣ್ಣ ವಕೀಲರು-ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ

ಮಂಗಳೂರು(ಬೆಂಗಳೂರು): ‘ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿದ್ದು, ಇಂದು ಎಸ್‌ಐಟಿ ಕಚೇರಿಗೆ ಕರೆತರುವ ನಿರೀಕ್ಷೆ ಇದೆ. ಈಗಾಗಲೇ ಪ್ರಜ್ವಲ್ ಪರ ವಕೀಲ ಅರುಣ್ ಅವರು ಬೆಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಗುರುವಾರ ರಾತ್ರಿ ಸಿಐಡಿ ಕಟ್ಟಡದಲ್ಲಿರುವ ಸೆಲ್‌ನಲ್ಲಿ ಪ್ರಜ್ವಲ್ ಅವರನ್ನು ಇರಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಜೊತೆಗೆ, ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಜ್ವಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪ್ರಕರಣದಲ್ಲಿ ಇದುವರೆಗೂ ಕಲೆಹಾಕಿರುವ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸಲಾಗುವುದು. ಆರೋಪಿ ವಿಚಾರಣೆ ಅಗತ್ಯವಿರುವುದಾಗಿ ನ್ಯಾಯಾಲಯಕ್ಕೆ ಹೇಳಿ ಕಸ್ಟಡಿಗೆ ಪಡೆಯಲಾಗುವುದು’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

LEAVE A REPLY

Please enter your comment!
Please enter your name here