ಲೈಂಗಿಕ ದೌರ್ಜನ್ಯ ಪ್ರಕರಣ-ಆರೋಪಿ ಪ್ರಜ್ವಲ್ ರೇವಣ್ಣ 6 ದಿನ ಪೊಲೀಸ್ ಕಸ್ಟಡಿಗೆ

ಮಂಗಳೂರು(ಬೆಂಗಳೂರು): ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದ್ದು, ನಿಗದಿತ ಅವಧಿಯಲ್ಲಿ ತನಿಖೆ ಮುಗಿದರೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ಬಂಧನ ಭೀತಿಯಲ್ಲಿದ್ದ ಪ್ರಜ್ವಲ್, ಲೋಕಸಭಾ ಚುನಾವಣೆಯ ಮತದಾನದ ನಂತರ ದೇಶದಿಂದ ಪರಾರಿಯಾಗಿದ್ದರು. 35 ದಿನಗಳ ಬಳಿಕ ಜರ್ಮನಿಯಿಂದ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ ಬಂದಿಳಿದ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಇಂದು ಪ್ರಜ್ವಲ್‌ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, 6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here