ವಿಧಾನಸಭಾ ಚುನಾವಣಾ ಫಲಿತಾಂಶ – ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ 23 ಸ್ಥಾನಗಳಲ್ಲಿ ಗೆಲುವು – ಸಿಕ್ಕಿಂನಲ್ಲಿ ಎಸ್‌‍ಕೆಎಂ ಗೆ 11 ಸ್ಥಾನಗಳಲ್ಲಿ ಜಯ – ಸಂಭ್ರಮಾಚರಣೆ

ಮಂಗಳೂರು (ಹೊಸದಿಲ್ಲಿ): ಅರುಣಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಯು 23 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು, 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮತ್ತೆ ಅಧಿಕಾರವನ್ನು ಉಳಿಸಿಕೊಳ್ಳುವ ಹಾದಿಯಲ್ಲಿರುವುದು ಚುನಾವಣಾ ಆಯೋಗದ ದತ್ತಾಂಶಗಳಿಂದ ವ್ಯಕ್ತವಾಗಿದೆ.

ಅರುಣಾಚಲ ಪ್ರದೇಶದಲ್ಲಿ ಬಿಜೆಪಿಯು ಈಗಾಗಲೇ 10 ವಿಧಾನಸಭಾ ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ. ಈ ಪೈಕಿ ಮುಖ್ಯಮಂತ್ರಿ ಪೇಮಾ ಖಂಡು ಹಾಗೂ ಉಪ ಮುಖ್ಯಮಂತ್ರಿ ಚೌನಾ ಮೇಯ್ನ್ ಕ್ರಮವಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ನಿಚ್ಚಳವಾಗಿರುವುದರಿಂದ, ರಸ್ತೆಗಳಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

LEAVE A REPLY

Please enter your comment!
Please enter your name here