ರಸ್ತೆಯಲ್ಲಿ ನಮಾಝ್‌ – ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ಹಾಗೂ ದ್ವೇಷ ಹರಡುವ ಮಾಧ್ಯಮಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

ಮಂಗಳೂರು: ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್ ಮಾಡಿದವರ ಮೇಲೆ ಕೇಸು ದಾಖಲು ಮಾಡಲಾಗಿದ್ದು, ಸ್ವಯಂ ಪ್ರೇರಿತ ಕೇಸು ದಾಖಲಿಸಿದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರು ಮಿನಿ ವಿಧಾನಸೌಧದ ಮುಂದೆ ದ.ಕ.ಜಿಲ್ಲಾ ಎಸ್‌ಡಿಪಿಐ ಪ್ರತಿಭಟನೆ ನಡೆಸಿದ್ದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ಹಾಗೂ ದ್ವೇಷ ಹರಡುವ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದೆ.

ʼಮುಸ್ಲಿಮರ ಮೇಲೆ ಸುಮೋಟೋ ಯಾಕೆ? ಹಲೋ ಮಿಸ್ಟರ್ ಸ್ಪೀಕರ್ ಸರ್ ಉತ್ತರಿಸಿ ಉತ್ತರಿಸಿ..ʼ, ʼಸಿದ್ದು ಹಿಡಿತದ ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತಕ್ಕೆ – ಧಿಕ್ಕಾರ ಧಿಕ್ಕಾರʼ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ದ.ಕ. ಜಿಲ್ಲೆಯ ಪೊಲೀಸರು ಬಜರಂಗಿಗಳಾಗಿ ಬಿಟ್ಟಿದ್ದಾರೆ. ಸಂವಿಧಾನಬದ್ಧವಾಗಿ ಕೆಲಸ ಮಾಡುವ ಬದಲು ಗುಲಾಮರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬೂಟಾಟಿಕೆಯ ರಾಜಕಾರಣ ಮಾಡತೊಡಗಿದ್ದಾರೆ ಎಂದು ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಎಸ್‌ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here