ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತೋರ್ವ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅರೆಸ್ಟ್‌

ಸುಳ್ಯ, ಜೂ 04: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ. ಈತ ವಿದೇಶಕ್ಕೆ ಪರಾರಿಯಾಗುಲು ಯತ್ನಿಸುತ್ತಿದ್ದಾಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ‌ಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್​ನನ್ನು ಬಂಧಿಸಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರಿಗೆ ಅವರ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್​ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

LEAVE A REPLY

Please enter your comment!
Please enter your name here