



ಮಂಗಳೂರು(ಹಾಸನ):ಹಾಸನದಲ್ಲಿ ಬೆಳ್ಳಂ ಬೆಳಿಗ್ಗೆ ನೆತ್ತರು ಹರಿದಿದ್ದು ನಟೋರಿಯಸ್ ರೌಡಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.







ರವಿ ಅಲಿಯಾಸ್ ಚೈಲ್ಡ್ ರವಿ (45) ಕೊಲೆಯಾದ ರೌಡಿ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಹಾಸನದ ಹೇಮಾವತಿ ನಗರದಲ್ಲಿ ಘಟನೆ ನಡೆದಿದ್ದು, ಕುಡಿಯುವ ನೀರು ತೆಗೆದುಕೊಂಡು ಬೈಕ್ನಲ್ಲಿ ರವಿ ತೆರಳುತ್ತಿದ್ದ ವೇಳೆ ಅಟ್ಯಾಕ್ ಮಾಡಿದ ಹಂತಕರು ಮಾರಕಾಸ್ತ್ರಗಳಿಂದ ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಚೈಲ್ಡ್ ರವಿ ಈ ಹಿಂದೆ ಕೊಲೆ,ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















