



ಮಂಗಳೂರು (ಬೆಂಗಳೂರು): ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಇಂದು (ಜೂ.6) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಚಿವ ನಾಗೇಂದ್ರ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಿಂದ ನಿರ್ಗಮಿಸಿದ್ದಾರೆ. ಆದರೆ ಇಂದು ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬಗ್ಗೆ ಮಾಹಿತಿ ಮತ್ತು ಹಗರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಅದಕ್ಕೆ ಸ್ಪಷ್ಟನೆ ನೀಡಲಿದ್ದಾರೆ.



















