ಈನಾಡು ಪತ್ರಿಕೆ ಈಟಿವಿ ತೆಲುಗು, ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಮಂಗಳೂರು/ಹೈದರಾಬಾದ್: ಈನಾಡು ಪತ್ರಿಕೆ, ಈಟಿವಿ ತೆಲುಗು ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಅನಾರೋಗ್ಯಕ್ಕೊಳಗಾಗಿದ್ದ ರಾಮೋಜಿ ರಾವ್ ಅವರನ್ನು ಹೈದರಾಬಾದ್‌ನ ಸ್ಟಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು (ಶನಿವಾರ)  ಮುಂಜಾನೆ 3 ಗಂಟೆ ಸೂಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ರಾಮೋಜಿ ರಾವ್ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here